ಶ್ರೀ ಕೃಷ್ಣ ವಿದ್ಯಾಸಂಸ್ಥೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ ಕಾರ್ಯಕ್ರಮ

February 10, 2026
class 10 exam preparation training shree krishna

ಪಟ್ಟೆ ಬಡಗನ್ನೂರು : ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾಪೂರ್ವ ತಯಾರಿ ತರಬೇತಿ ಕಾರ್ಯಕ್ರಮ ದಿನಾಂಕ 09/02/2026 ನೇ ಸೋಮವಾರ ಶಾಲಾ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ನಿರ್ದೇಶಕರಾದ ಶ್ರೀಮಾನ್ ಗಣರಾಜ ಕುಂಬ್ಳೆಯವರು ದೀಪ ಬೆಳಗಿಸಿ ಉದ್ಘಾಟಿಸಿ 10ನೇ ತರಗತಿಯು ಜೀವನದಲ್ಲಿ ಅತ್ಯಂತ ಮುಖ್ಯವಾದ ಹಂತವಾಗಿದ್ದು, ಈ ತರಬೇತಿಯು ಮುಂದಿನ ಪರೀಕ್ಷೆಗೆ ಅಡಿಪಾಯವಾಗಲಿದೆ ಎಂದರು. ಶ್ರೀ ಜಿ ಎಸ್ ಶಶಿಧರ್ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಇವರು ಆನ್ ಲೈನ್ ಮುಖಾಂತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ತದನಂತರ ಶ್ರೀ ನಾರಾಯಣ ಕೆ ನಿವೃತ್ತ ಮುಖ್ಯಗುರುಗಳು ಸರಕಾರಿ ಪ್ರೌಢಶಾಲೆ ಉಪ್ಪಳಿಗೆ ಇವರು ಪರೀಕ್ಷಾ ನೀಲನಕಾಶೆಯ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರೌಢಶಾಲಾ ವಿಭಾಗದ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀಯುತ ಲಿಂಗಪ್ಪಗೌಡ ಮೋಡಿಕೆ, ಸಂಚಾಲಕರಾದ ಶ್ರೀಯುತ ವಿಘ್ನೇಶ್ ಹಿರಣ್ಯ, ಪ್ರೌಢಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಮನಾ ಬಿ ಮಾತಾಜಿ ಉಪಸ್ಥಿತರಿದ್ದರು. ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ ಅವರು ಸ್ವಾಗತಿಸಿ, ಪ್ರೌಢಶಾಲಾ ಮುಖ್ಯಗುರುಗಳಾದ ಶ್ರೀಮತಿ ಸುಮನಾ ಬಿ ಮಾತಾಜಿ ವಂದಿಸಿದರು. ವಿಜ್ಞಾನ ಶಿಕ್ಷಕಿ ಶ್ರೀಮತಿ ಭವಿತಾ ಪಿ ಮಾತಾಜಿ ಅವರು ಕಾರ್ಯಕ್ರಮ ನಿರೂಪಿಸಿದರು.

Dwaraka Constructions Ad

Related Blog

karnataka volleyball team secures national runner up
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡ ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ಸ್ಥಾನ
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಗಳ ವಿದ್ಯಾರ್ಥಿಗಳು ಕ್ಷೇತ್ರೀಯ ಮಟ್ಟದ ವಿದ್ಯಾ ಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
guru prsshasti award fetured image
ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಶ್ರೀಕೃಷ್ಣ ಲೀಲೆ 2026 ಮತ್ತು ಸಾಂದೀಪನಿ ಗುರುಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ