ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಶ್ರೀ ಕೃಷ್ಣ ಲೀಲಾ ಕಾರ್ಯಕ್ರಮದ ಸಮಾಲೋಚನಾ ಸಭೆ

August 10, 2026
consultation meeting for sri krishna leela programme

ಪಟ್ಟೆ ಬಡಗನ್ನೂರು : ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಸೆಪ್ಟಂಬರ್ 5 ನೇ ತಾರೀಕಿ ನಂದು ನಡೆಯುವ ಶ್ರೀ ಕೃಷ್ಣ ಲೀಲಾಉತ್ಸವದ ಸಮಾಲೋಚನಾ ಸಭೆಯು ದಿನಾಂಕ 09/08/ 2026ನೇ ರವಿವಾರಂದು ಸಂಸ್ಥೆಯ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

consultation meeting for sri krishna leela programme

ಶ್ರೀಮಾನ್ ಗೋಪಾಲಕೃಷ್ಣ ಭಟ್ಟರು “ಇದು ಕೇವಲ ಶಾಲೆಯ ಕಾರ್ಯಕ್ರಮ ಅಲ್ಲ. ನಮ್ಮ ಊರಿನ ಕಾರ್ಯಕ್ರಮ.ಎಲ್ಲರೂ ಸಂಪೂರ್ಣ ಸಹಕಾರವನ್ನು ನೀಡಬೇಕು”ಎಂದು ಕೋರಿದರು.
ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಗಳ ನಿರ್ದೇಶಕರಾದ ಶ್ರೀಮಾನ್ ಗಣರಾಜ ಕುಂಬ್ಳೆ, ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ, ಪ್ರೌಢಶಾಲಾ SDMC ಅಧ್ಯಕ್ಷರಾದ ಶ್ರೀಲಿಂಗಪ್ಪ ಗೌಡ ಮೂಡಿಕೆ, ಶಾಲಾ ಮುಖ್ಯ ಗುರುಗಳು ಉಪಸ್ಥಿತರಿದ್ದರು. ಸಭೆಯಲ್ಲಿ ವಿವಿಧ ಉಪ ಸಮಿತಿಗಳ ಸಂಚಾಲಕರನ್ನು ನೇಮಿಸಲಾಯಿತು. ಸಭೆಯಲ್ಲಿ ಪಟ್ಟೆ ಪರಿಸರದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಸರ್ವ ಸದಸ್ಯರು, ಸಾಮಾಜಿಕ ಕಾರ್ಯಕರ್ತರು, ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಮಾನ್ ವಿಘ್ನೇಶ್ ಹಿರಣ್ಯರು ಸ್ವಾಗತಿಸಿ, ಧನ್ಯವಾದಗಳನ್ನು ಸಮರ್ಪಿಸಿದರು. ವಿದ್ಯಾಸಂಸ್ಥೆಗಳ ಶಿಕ್ಷಕರು ಸಹಕರಿಸಿದರು.

Dwaraka Constructions Ad

Related Blog

ಪುತ್ತೂರು ವಲಯದ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗೆ ಬಹುಮಾನಗಳು
kanakabhiyana ramadhanya charite gamaka
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ, ಬಡಗನ್ನೂರು ಕನಕಾಭಿಯಾನ -ರಾಮಧಾನ್ಯ ಚರಿತೆ -ಗಮಕ
Shrikrishna educational trust
ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ -ವಿನಾಯಕ ಚೌತಿ ಹಬ್ಬದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ