ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ : ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯ ವಿದ್ಯಾರ್ಥಿಗಳಿಗೆ ಬಹುಮಾನ

February 10, 2026
district level yogasana competition

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ) ಗುತ್ತಿಗಾರು ಇದರ ವತಿಯಿಂದ 5ನೇ ವರ್ಷಾಚರಣೆ ಪ್ರಯುಕ್ತ ಜೆಸಿಐ ಪಂಜ ಪಂಚಶ್ರೀ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಇದರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ 14 ವಿದ್ಯಾರ್ಥಿಗಳು ಭಾಗವಹಿಸಿ, 9ನೇ ತರಗತಿಯ ಯಶ್ವಿತ್.ಕೆ. ದ್ವಿತೀಯ ಸ್ಥಾನವನ್ನು, ಹಾಗೂ 9ನೇ ತರಗತಿಯ ಆದಿತ್ಯ ಕೃಷ್ಣ ಎ ಇವರು ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ, ಆಡಳಿತ ಮಂಡಳಿ, ಮುಖ್ಯಗುರುಗಳು, ಹಾಗೂ ಶಿಕ್ಷಕ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Dwaraka Ad

Related Blog

ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಶ್ರೀ ರಾಮನವಮಿ ಆಚರಣೆ ಮತ್ತು ಆಕಾಶಕ್ಕೆ ಏಣಿ ಬೇಸಿಗೆ ಶಿಬಿರ
ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಯ Inspire Award ಮಾದರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
Science Exhibition National Science Day
ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ