ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಶಿಕ್ಷಕರ ಶೈಕ್ಷಣಿಕ ಭೇಟಿ

August 27, 2026

ಪಟ್ಟೆ ಬಡಗನ್ನೂರು: ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಶಿಕ್ಷಕರ ತಂಡವು ದಿನಾಂಕ 26/08/2026ನೇ ಬುಧವಾರದಂದು ರಾಷ್ಟ್ರೋತ್ಥಾನ ವಿದ್ಯಾ ಸಂಸ್ಥೆ ತೊಕ್ಕೊಟ್ಟು ಇಲ್ಲಿಗೆ ಶೈಕ್ಷಣಿಕ ಭೇಟಿ ನೀಡಿದರು. ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿಯಾದ ಶ್ರೀ ಗಣರಾಜ ಕುಂಬ್ಳೆ ಅವರ ಮಾರ್ಗದರ್ಶನದಲ್ಲಿ ಈ ಶೈಕ್ಷಣಿಕ ಭೇಟಿಯನ್ನು ಆಯೋಜಿಸಲಾಗಿತ್ತು. ಶಾಲಾ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯರವರು ಉಪಸ್ಥಿತರಿದ್ದರು. ಶಿಕ್ಷಣಕ್ಷೇತ್ರದಲ್ಲಿ ಅಳವಡಿಸಿಕೊಳ್ಳಲಾಗುತ್ತಿರುವ ನವೀನ ಬೋಧನಾ ವಿಧಾನಗಳು, ಪಂಚಮುಖೀ ಶಿಕ್ಷಣ, ಶೈಕ್ಷಣಿಕ ಚಟುವಟಿಕೆಗಳು, ಸಂಸ್ಥೆಯ ಕಾರ್ಯವೈಖರಿ ಹಾಗೂ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗಾಗಿ ಕೈಗೊಳ್ಳಲಾಗುತ್ತಿರುವ ವಿವಿಧ ಪ್ರಯತ್ನಗಳ ಕುರಿತು ಪ್ರಾಯೋಗಿಕ ಅರಿವು ಮೂಡಿಸುವುದು ಭೇಟಿಯ ಪ್ರಮುಖ ಉದ್ದೇಶವಾಗಿತ್ತು. ಶಾಲಾ ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ಕಾಮತ್ ಹಾಗೂ ಶಿಕ್ಷಕರು ಮಾಹಿತಿಯನ್ನು ನೀಡಿದರು.

Dwaraka Constructions Ad

Related Blog

karnataka volleyball team secures national runner up
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡ ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ಸ್ಥಾನ
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಗಳ ವಿದ್ಯಾರ್ಥಿಗಳು ಕ್ಷೇತ್ರೀಯ ಮಟ್ಟದ ವಿದ್ಯಾ ಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
guru prsshasti award fetured image
ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಶ್ರೀಕೃಷ್ಣ ಲೀಲೆ 2026 ಮತ್ತು ಸಾಂದೀಪನಿ ಗುರುಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ