ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಬೀಳ್ಕೊಡುವ ಸಮಾರಂಭ ಹಾಗೂ ಸಮುದಾಯದತ್ತ ಸಭೆ

April 7, 2026
farewell community meeting patte

ಪಟ್ಟೆ ಬಡಗನ್ನೂರು : “ಪರೀಕ್ಷೆ ಎಂದರೆ ಯಾವುದೇ ತಯಾರಿ ಇರಬಾರದು, ಕಲಿಯುವ ಪ್ರಕ್ರಿಯೆ ನಿರಂತರವಾಗಿರಬೇಕು, ಪರೀಕ್ಷೆ ದೈನಂದಿನ ಚಟುವಟಿಕೆ, ನಿರಂತರ ಪಯಣ ನಿಮ್ಮದಾಗಲಿ” ಎಂದು ಪಟ್ಟೆ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ದಿನಾಂಕ 8 /4 /2026ನೇ ಬುಧವಾರದಂದು ಪಟ್ಟೆ ವಿದ್ಯಾ ಸಂಸ್ಥೆಗಳಲ್ಲಿ ನಡೆದ 2025 -26 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಹಾಗೂ ಸಮುದಾಯದತ್ತ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಸಂಸ್ಥೆಯ ನಿರ್ದೇಶಕರಾದ ಶ್ರೀ ಗಣರಾಜ ಕುಂಬ್ಳೆ ಅವರು ಸುಸಂಸ್ಕೃತ ಸಮಾಜವೇ ನಮ್ಮ ಧ್ಯೇಯ, ನಾವು ಕಲಿತ ಶಾಲೆ, ಗುರು ಹಿರಿಯರನ್ನು, ತಂದೆ-ತಾಯಿಯವರನ್ನು ಎಂದಿಗೂ ಮರೆಯಬಾರದೆಂದು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ಈ ಕಾರ್ಯಕ್ರಮದಲ್ಲಿ 9ನೇ ತರಗತಿಯ ಯಶ್ವಿತ್ ಮತ್ತು ಜೀವಿತಾ ಹೆಚ್, 10ನೇ ತರಗತಿಯ ಧನ್ವಿತ್ ಗೌಡ ಕೆ ಪಿ. ತೃತಿಕ್ , ಪೂರ್ವಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ ಭವಿತಾ ಮಾತಾಜಿ, ಕನ್ನಡ ಶಿಕ್ಷಕರಾದ ವಿಶ್ವನಾಥ ಬಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಂಸ್ಥೆಯ ನಿರ್ದೇಶಕರಾದ ಶ್ರೀ ಜಿ ಪರಮೇಶ್ವರ್ ಭಟ್, ಸಂಚಾಲಕರದ ಶ್ರೀ ವಿಘ್ನೇಶ್ ಹಿರಣ್ಯ, ಪ್ರೌಢಶಾಲಾ SDMC ಅಧ್ಯಕ್ಷರಾದ ಶ್ರೀ ಲಿಂಗಪ್ಪಗೌಡ ಮೋಡಿಕೆ, ಪ್ರಾಥಮಿಕ ಶಾಲಾ SDMC ಅಧ್ಯಕ್ಷರಾದ ಶ್ರೀ ಕೇಶವ ಪ್ರಸಾದ್ ನೀಲಗಿರಿ, ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಕೊಪ್ಪಳ, ಪ್ರೌಢಶಾಲಾ ಮುಖ್ಯಗುರು ಗಳಾದ ಶ್ರೀಮತಿ ಸುಮನಾ ಮಾತಾಜಿ ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾದ ಶ್ರೀ ರಾಜಗೋಪಾಲ ಯನ್ ಉಪಸ್ಥಿತರಿದ್ದರು. 9ನೇ ತರಗತಿಯ ಶ್ರಾವ್ಯ ಸ್ವಾಗತಿಸಿ, 9ನೇ ತರಗತಿಯ ನಿಶಾಂತ್ ಧನ್ಯವಾದವನ್ನಿತ್ತರು. 9ನೇ ತರಗತಿಯ ಯಶ್ವಿತಾ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಸಮುದಾಯದತ್ತ ಕಾರ್ಯಕ್ರಮದಲ್ಲಿ ಪೋಷಕರು ತಮ್ಮ ಮಕ್ಕಳ ಪ್ರಗತಿಪತ್ರವನ್ನು ಪರಿಶೀಲಿಸಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

Dwaraka Constructions Ad

Related Blog

ಪುತ್ತೂರು ವಲಯದ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗೆ ಬಹುಮಾನಗಳು
kanakabhiyana ramadhanya charite gamaka
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ, ಬಡಗನ್ನೂರು ಕನಕಾಭಿಯಾನ -ರಾಮಧಾನ್ಯ ಚರಿತೆ -ಗಮಕ
Shrikrishna educational trust
ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ -ವಿನಾಯಕ ಚೌತಿ ಹಬ್ಬದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ