ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ FOCUS 360 ಶಿಕ್ಷಕರ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ

July 7, 2025
teachers-training

ಪಟ್ಟೆ ಬಡಗನ್ನೂರು : ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿ ದಿನಾಂಕ: 5-7-2025 ನೇ ಶನಿವಾರದಂದು ಶಿಕ್ಷಕರ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ನಡೆಯಿತು. ಪುತ್ತೂರಿನ ಹೆಸರಾಂತ ಉದ್ಯಮಿಗಳಾದ ಗೋಲೆಕ್ಸ್ ಎಂಟರ್ಪ್ರೈಸಸ್ ಸಂಸ್ಥೆಯ ಮಾಲೀಕರಾದ ಹಾಗೂ ಜೆ.ಸಿ.ಐ ತರಬೇತುದಾರರಾದ ಶ್ರೀಯುತ ಕೃಷ್ಣಮೋಹನ್ ಪಿ ಎಸ್ ಹಾಗೂ ಮತ್ತೊರ್ವ ತರಬೇತುದಾರರಾದ ಶ್ರೀಯುತ ಪಶುಪತಿ ಶರ್ಮ ಇವರು ತರಬೇತಿಯನ್ನು ನಡೆಸಿಕೊಟ್ಟರು. FOCUS 360 ಎಂಬ ಶೀರ್ಷಿಕೆಯಡಿ ನಡೆದ ಕಾರ್ಯಾಗಾರದಲ್ಲಿ ಶಿಕ್ಷಕ ವೃತ್ತಿಯ ಹಲವು ಮಜಲುಗಳು ಮತ್ತು ಸವಾಲುಗಳ ಹಾಗೂ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರು ಹೊಂದಿರಬೇಕಾದ ಅಗತ್ಯತೆಗಳ ಕುರಿತು ತರಬೇತುದಾರರು ಮಾಹಿತಿಯನ್ನು ನೀಡಿದರು. ಸಂಸ್ಥೆಯ ಸಂಚಾಲಕರಾದ ಶ್ರೀಮಾನ್ ವಿಘ್ನೇಶ್ ಹಿರಣ್ಯರವರು ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಸುಮನ ಬಿ ಮಾತಾಜಿ ವಂದಿಸಿದರು. ಕಾರ್ಯಗಾರದಲ್ಲಿ ಸಂಸ್ಥೆಯ ಎಲ್ಲಾ ಬೋಧಕ ವರ್ಗದವರು ಉಪಸ್ಥಿತರಿದ್ದರು.

Dwaraka Ad

Related Blog

ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಶ್ರೀ ರಾಮನವಮಿ ಆಚರಣೆ ಮತ್ತು ಆಕಾಶಕ್ಕೆ ಏಣಿ ಬೇಸಿಗೆ ಶಿಬಿರ
ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಯ Inspire Award ಮಾದರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
Science Exhibition National Science Day
ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ