ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಗಮಕವಾಚನ

August 20, 2026
gamaka recitation sri krishna

ಪಟ್ಟೆ ಬಡಗನ್ನೂರು: ದಿನಾಂಕ 19/08/ 2026ನೇ ಬುಧವಾರದಂದು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಒಂಬತ್ತನೆಯ ಮತ್ತು ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಪಠ್ಯಧಾರಿತ ಗಮಕ ವಾಚನ ಕಾರ್ಯಕ್ರಮ ನಡೆಯಿತು. ಗಮಕಿಯಾಗಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕರಾದ ಶ್ರೀ ಚಂದ್ರಶೇಖರ್ ಸುಳ್ಯ ಪದವು, ವ್ಯಾಖ್ಯಾನಕಾರರಾಗಿ ಶ್ರೀ ಅಪ್ಪಕುಂಞಿ ಯಾದವ್, ಹಾರ್ಮೋನಿಯಂ ವಾದಕರಾಗಿ ಶ್ರೀ ಸತೀಶ್ ಹೆಬ್ಬಾರ್ ಅಡೂರು ಭಾಗವಹಿಸಿದರು.

gamaka recitation sri krishna

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ ರವರು ಅತಿಥಿಗಳಿಗೆ ಶಾಲು ಹೊದೆಸಿ ಸ್ವಾಗತಿಸಿದರು, ಪ್ರೌಢಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಮನಾ ಬಿ. ಅತಿಥಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಪ್ರೌಢ ಶಾಲೆಯ 9 ಮತ್ತು 10ನೆಯ ತರಗತಿ ವಿದ್ಯಾರ್ಥಿಗಳು ‘ಪಠ್ಯಾಧಾರಿತ ಗಮಕವಾಚನ’ದ ಪ್ರಯೋಜನವನ್ನು ಪಡೆದರು. ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಾದ ಶ್ರೀ ವಿಶ್ವನಾಥ್ ಬೊಳ್ಳಾಡಿ ಯವರು ಸ್ವಾಗತಿಸಿ, ಧನ್ಯವಾದವನ್ನು ಅರ್ಪಿಸಿದರು. ಪ್ರೌಢಶಾಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಸಹಕರಿಸಿದರು.

gamaka recitation sri krishna
Dwaraka Ad

Related Blog

ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಗಳ ವಿದ್ಯಾರ್ಥಿಗಳು ಕ್ಷೇತ್ರೀಯ ಮಟ್ಟದ ವಿದ್ಯಾ ಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
guru prsshasti award fetured image
ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಶ್ರೀಕೃಷ್ಣ ಲೀಲೆ 2026 ಮತ್ತು ಸಾಂದೀಪನಿ ಗುರುಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ
training camp for the volleyball team
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡಕ್ಕೆ ಒಂದು ವಾರಗಳ ಕಾಲ ತರಬೇತಿ ಶಿಬಿರ