ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಯ ತರಬೇತಿ ಉದ್ಘಾಟನೆ

August 21, 2026

“ನಮ್ಮ ಸಾಧನೆಯ ಫಲ ದೀರ್ಘಕಾಲ ದೊರೆಯುವಂತಾಗಬೇಕು. ವಿದ್ಯಾರ್ಥಿಗಳು ಇದನ್ನು ಮನಗಂಡು ನಿರಂತರ ಅಧ್ಯಯನದಲ್ಲಿ ತೊಡಗಿ ಕೊಳ್ಳಬೇಕು” ಎಂದು ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿ, ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ನಿರ್ದೇಶಕ ಗಣರಾಜ ಕುಂಬ್ಳೆ ನುಡಿದರು. ಅವರು ಬಡಗನ್ನೂರು ಪಟ್ಟೆಯ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆ(NMMS)ಯ ಪೂರ್ವ ತಯಾರಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.


ಸಂಸ್ಥೆಯ ಮುಖ್ಯ ಗುರುಗಳಾದ ಶ್ರೀಮತಿ ಸುಮನಾ ಮಾತಾಜಿ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಗೆ ಹಾಜರಾಗುವ ಎಂಟನೇ ತರಗತಿಯ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಹಾಜರಿದ್ದರು. ಶ್ರೀಮತಿ ಭವಿತಾ ಮಾತಾಜಿಯವರು ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದಗಳನ್ನು ಅರ್ಪಿಸಿದರು.

Dwaraka Constructions Ad

Related Blog

karnataka volleyball team secures national runner up
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡ ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ಸ್ಥಾನ
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಗಳ ವಿದ್ಯಾರ್ಥಿಗಳು ಕ್ಷೇತ್ರೀಯ ಮಟ್ಟದ ವಿದ್ಯಾ ಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
guru prsshasti award fetured image
ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಶ್ರೀಕೃಷ್ಣ ಲೀಲೆ 2026 ಮತ್ತು ಸಾಂದೀಪನಿ ಗುರುಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ