ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಯ Inspire Award ಮಾದರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

March 12, 2026
ಪಟ್ಟೆ ಬಡಗನ್ನೂರು : ವಿದ್ಯಾರ್ಥಿಗಳ ಅನ್ವೇಷಣಾ ಸಾಮರ್ಥ್ಯವನ್ನು ಗುರುತಿಸುವ ಭಾಗವಾಗಿ ಕೇಂದ್ರ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ವತಿಯಿಂದ ನಡೆಸಲ್ಪಡುವ Inspire ಪ್ರಶಸ್ತಿ 2025-26 ನೇ ಸಾಲಿನಲ್ಲಿ  ದ್ವಾರಕಾ ಪ್ರತಿಷ್ಠಾನ (ರಿ.)  ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆ  ಪಟ್ಟೆಯ 9ನೇ ತರಗತಿಯ ವಿದ್ಯಾರ್ಥಿ ಪ್ರಿನ್ಸನ್ ಲಾಯ್ ಡಿ ಸೋಜಾ Rain Detector  ಎಂಬ ವಿಜ್ಞಾನ ಮಾದರಿಯು  ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ರೂ. 10,000/- ನಗದು ಪುರಸ್ಕಾರವನ್ನು ಪಡೆದಿರುತ್ತಾರೆ. ಸಂಸ್ಥೆಯ ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ ಭವಿತಾ ಪಿ ಇವರು ವಿದ್ಯಾರ್ಥಿಗೆ ಮಾರ್ಗದರ್ಶನವನ್ನು ನೀಡಿರುತ್ತಾರೆ. ವಿದ್ಯಾರ್ಥಿಯನ್ನು ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್, ಸಂಚಾಲಕರಾದ  ಶ್ರೀ ವಿಘ್ನೇಶ್ ಹಿರಣ್ಯ, ಆಡಳಿತ ಮಂಡಳಿಯವರು ಹಾಗೂ ಮುಖ್ಯಗುರುಗಳು, ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.
Dwaraka Ad

Related Blog

ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಯ Inspire Award ಮಾದರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
Science Exhibition National Science Day
ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ
karate belt examination patte sri krishna educational institutions
ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಕರಾಟೆ ಬೆಲ್ಟ್ ಪರೀಕ್ಷೆ