ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

November 3, 2026

ಪಟ್ಟೆ ಬಡಗನ್ನೂರು: ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯರವರು ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದ ಅಂಗವಾಗಿ ಸಮಾರಂಭದ ಅಧ್ಯಕ್ಷರು, ಮುಖ್ಯ ಅತಿಥಿಗಳು ಕನ್ನಡ ನಾಡದೇವಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾದ ಶ್ರೀ ರಾಜಗೋಪಾಲ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿ ಕನ್ನಡನಾಡು, ನುಡಿ ಮತ್ತು ಸಂಸ್ಕೃತಿಯ ಬಗ್ಗೆ ವಿವರವಾಗಿ ತಿಳಿಯಪಡಿಸಿದರು.


ವೇದಿಕೆಯಲ್ಲಿ ಪ್ರೌಢಶಾಲಾ ಮುಖ್ಯಗುರುಗಳಾದ ಶ್ರೀಮತಿ ಸುಮನ ಮಾತಾಜಿ, ಆಂಗ್ಲ ಭಾಷೆ ಮುಖ್ಯ ಗುರುಗಳಾದ ಶ್ರೀಮತಿ ಪುಷ್ಪಾವತಿ ಮಾತಾಜಿ ಅವರು ಉಪಸ್ಥಿತರಿದ್ದರು.

ಶ್ರೀಮತಿ ಭವಿತಾ ಮಾತಾಜಿ ಸ್ವಾಗತಿಸಿ, ಶ್ರೀಮತಿ ಸೌಮ್ಯ ಮಾತಾಜಿ ಧನ್ಯವಾದವನ್ನಿತ್ತರು. ಶ್ರೀ ವಿಶ್ವನಾಥ ಗೌಡ ಬೊಳ್ಳಾಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಸಂಸ್ಥೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.

Dwaraka Constructions Ad

Related Blog

ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
Second prize in volleball image
ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ.
Patte sharada pooja
ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಶಾರದ ಪೂಜೆ ಮತ್ತು ಅಕ್ಷಾರಾರಂಭ