ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡ ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ಸ್ಥಾನ

September 11, 2026
karnataka volleyball team secures national runner up

ಸೆಪ್ಟಂಬರ್ 6ರಿಂದ 10ರ ತನಕ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದ ರಾಷ್ಟ್ರಮಟ್ಟದ 3A ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಜೂನಿಯರ್ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡ ದ್ವಿತೀಯ ಸ್ಥಾನ ಗಳಿಸಿರುತ್ತದೆ.

ಈ ತಂಡದ ನಾಯಕತ್ವ ವಹಿಸಿದವರು ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯ ಕ್ರೀಡಾಪಟು 9ನೇ ತರಗತಿಯ ಪ್ರತ್ವಿಶ್ ಕನ್ನಾಯ ಹಾಗೂ ಈ ತಂಡದಲ್ಲಿ ಇನ್ನೋರ್ವ ಆಟಗಾರನಾಗಿ ಒಂಬತ್ತನೇ ತರಗತಿ ನಿಶ್ಮಿತ್ ಭಾಗವಹಿಸಿರುತ್ತಾರೆ. ಈ ತಂಡಕ್ಕೆ ಪಟ್ಟೆಯ ಶ್ರೀಕೃಷ್ಣ ವಿದ್ಯಾ ಸಂಸ್ಥೆಯ ಕ್ರೀಡಾಂಗಣದಲ್ಲಿ ಒಂದು ವಾರಗಳ ಕಾಲ ತರಬೇತಿಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್ ಅವರ ಮಾರ್ಗದರ್ಶನದಲ್ಲಿ ನೀಡಲಾಗಿದೆ.

ಈ ತಂಡಕ್ಕೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ದೈಹಿಕ ಶಿಕ್ಷಣ ಶಿಕ್ಷಕರಾದ ಮೋನಪ್ಪ ಪಟ್ಟೆ, ಶ್ರೀ ಗೋಪಿನಾಥ್, ಆಮಮ್ಸ್ ಮೂಡಡ್ಕದ ದೈಹಿಕ ಶಿಕ್ಷಣ ಶಿಕ್ಷಕರಾದ ರಫೀಕ್ ಆತೂರು ತರಬೇತಿಯನ್ನು ನೀಡಿರುತ್ತಾರೆ.

Dwaraka Constructions Ad

Related Blog

karnataka volleyball team secures national runner up
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡ ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ಸ್ಥಾನ
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಗಳ ವಿದ್ಯಾರ್ಥಿಗಳು ಕ್ಷೇತ್ರೀಯ ಮಟ್ಟದ ವಿದ್ಯಾ ಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
guru prsshasti award fetured image
ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಶ್ರೀಕೃಷ್ಣ ಲೀಲೆ 2026 ಮತ್ತು ಸಾಂದೀಪನಿ ಗುರುಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ