ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪೋಷಕರ ಸಭೆ

October 21, 2025
parents meeting of sri krishna educational institutions english medium

ಬಡಗನ್ನೂರು:- ದಿನಾಂಕ 18.10.2025 ನೇ ಶನಿವಾರದಂದು ಪುತ್ತೂರು ದ್ವಾರಕ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಶ್ರೀ ಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ 2025- 26 ನೇ ಸಾಲಿನ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಯುತ ವಿಘ್ನೇಶ್ ಹಿರಣ್ಯ ಇವರು ವಹಿಸಿ, ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಭಾಷೆಯ ಅಗತ್ಯ ಎಲ್ಲರಿಗೂ ಇದೆ, ಆದರೆ ಒಟ್ಟಿಗೆ ಮಕ್ಕಳಿಗೆ ನಮ್ಮ ನೆಲದ ಭಾಷೆ, ಸಂಸ್ಕೃತಿ, ಆಚರಣೆಯನ್ನು ತಿಳಿಸಿಕೊಡುವ ಕಾರ್ಯವನ್ನು ಶಿಕ್ಷಕರು ಮತ್ತು ಪೋಷಕರು ಮಾಡಿದರೆ ಮಕ್ಕಳು ಸುಸಂಸ್ಕೃತ ವಿದ್ಯಾರ್ಥಿಯಾಗಿ ಸಮಾಜಕ್ಕೆ ಆಸ್ತಿಯಾಗುತ್ತಾರೆ ಎಂದು ತಿಳಿಸಿದರು. ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಶ್ರೀಮಾನ್ ರಾಜಗೋಪಾಲ್ ಇವರು ಪೋಷಕರ ಸಭೆಯ ಮಹತ್ವವನ್ನು ಸಭೆಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಯುತ ಸತೀಶ್ ಕೊಪ್ಪಳ ಉಪಸ್ಥಿತರಿದ್ದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನೆರೆದಿರುವ ಪೋಷಕರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಆಂಗ್ಲ ಮಾಧ್ಯಮ ವಿಭಾಗದ ವಿಭಾಗದ ಮಾತಾಜಿ ಅಶ್ವಿನಿ ಪಿ ಕೆ ವಂದಿಸಿ ಆಂಗ್ಲ ಮಾಧ್ಯಮ ವಿಭಾಗದ ಮಾತಾಜಿ ಭಾರತಿ ಪಿ ಕಾರ್ಯಕ್ರಮವನ್ನು ನಿರೂಪಿಸಿದರು. ಆಂಗ್ಲ ಮಾಧ್ಯಮ ಶಾಲಾ ವಿಭಾಗದ ಶಿಕ್ಷಕರು ಮತ್ತು ಶಿಕ್ಷಕೇತರ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Dwaraka Constructions Ad

Related Blog

karnataka volleyball team secures national runner up
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡ ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ಸ್ಥಾನ
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಗಳ ವಿದ್ಯಾರ್ಥಿಗಳು ಕ್ಷೇತ್ರೀಯ ಮಟ್ಟದ ವಿದ್ಯಾ ಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
guru prsshasti award fetured image
ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಶ್ರೀಕೃಷ್ಣ ಲೀಲೆ 2026 ಮತ್ತು ಸಾಂದೀಪನಿ ಗುರುಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ