ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವನ್ನು ಆಚರಣೆ

August 17, 2026
swatantryotsava acharane

ಪಟ್ಟೆ ಬಡಗನ್ನೂರು: ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ಅವರು ಧ್ವಜಾರೋಹಣ ಮಾಡಿದರು. ಅವರು “ವಿದ್ಯಾರ್ಥಿಗಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಸ್ವತಂತ್ರವಾಗಿರಬೇಕು ದೇಶಪ್ರೇಮವನ್ನು ಮೈಗೂಡಿಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಿ ಬಾಳಬೇಕೆಂದು” ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವಿದ್ಯಾರ್ಥಿಗಳ ಪಥ ಸಂಚಲನದ ಗೌರವಂದನೆಯನ್ನು ನಿವೃತ್ತ ಯೋಧರಾದ ಶ್ರೀಯುತ ಸುಂದರ ಪೂಜಾರಿ ಪಳಂಬೆ ಸ್ವೀಕರಿಸಿ ತನ್ನ ಸೇವಾವಧಿಯ ಅನುಭವಗಳನ್ನು ತಿಳಿಯ ಪಡಿಸಿದರು.

ಇದೇ ಸಂದರ್ಭದಲ್ಲಿ 14ರ ವಯೋಮಾನ ಮತ್ತು 17ರ ವಯೋಮಾನದ ವಾಲಿಬಾಲ್ ಪಂದ್ಯಾಟದಲ್ಲಿ ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆಯಾದ ಎಂಟನೇ ತರಗತಿಯ ಅದ್ವಿತ್ ಶೆಟ್ಟಿ, ಪ್ರಖ್ಯಾತ್, ಆದಿ, ಕೆ ಎ., ಸೃಜನ್ ಹಾಗೂ ಹತ್ತನೇ ತರಗತಿಯ ಸಾಥ್ವಿ ಹಾಗೂ ಅವರ ಪೋಷಕರನ್ನು ಅಭಿನಂದಿಸಲಾಯಿತು. 14ರ ವಯೋಮಾನದಲ್ಲಿ ರಾಜ್ಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಕುಮಾರಿ ಹರ್ಷಿಕಾ 8ನೇ ತರಗತಿ ಇವರನ್ನು ಅಭಿನಂದಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ನಿರ್ದೇಶಕರಾದ ಶ್ರೀ ಗಣರಾಜ ಕುಂಬ್ಳೆ, ಪ್ರೌಢಶಾಲಾ SDMC ಅಧ್ಯಕ್ಷರಾದ ಶ್ರೀ ಲಿಂಗಪ್ಪ ಗೌಡ ಮೋಡಿಕೆ, ಪ್ರಾಥಮಿಕ ಶಾಲೆಯ SDMC ಅಧ್ಯಕ್ಷರಾದ ಶ್ರೀ ಕೇಶವ ಪ್ರಸಾದ್ ನೀಲಗಿರಿ, ಸಂಸ್ಥೆಯ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ, ಪ್ರೌಢಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಮನಾ ಬಿ., ಪ್ರಾಥಮಿಕ ಶಾಲಾ ಮುಖ್ಯಗುರುಗಳಾದ ಶ್ರೀ ರಾಜಗೋಪಾಲ್ ಎನ್., ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಪುಷ್ಪಾವತಿ ಡಿ., ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾದ ಶ್ರೀ ರಾಜಗೋಪಾಲ ಎನ್. ಧನ್ಯವಾದವನ್ನಿತ್ತರು. ಶ್ರೀಮತಿ ಸ್ವರ್ಣಶ್ರೀ ಮಾತಾಜಿ ಕಾರ್ಯಕ್ರಮ ನಿರ್ವಹಿಸಿದರು.
ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯನ್ನು ಹಂಚಲಾಯಿತು. ಸಂಸ್ಥೆಯ ಎಲ್ಲಾ ಶಿಕ್ಷಕ ವರ್ಗದವರು ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು.

Dwaraka Constructions Ad

Related Blog

karnataka volleyball team secures national runner up
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡ ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ಸ್ಥಾನ
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಗಳ ವಿದ್ಯಾರ್ಥಿಗಳು ಕ್ಷೇತ್ರೀಯ ಮಟ್ಟದ ವಿದ್ಯಾ ಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
guru prsshasti award fetured image
ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಶ್ರೀಕೃಷ್ಣ ಲೀಲೆ 2026 ಮತ್ತು ಸಾಂದೀಪನಿ ಗುರುಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ