ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ

December 4, 2025
pre-exam preparation

ಪಟ್ಟೆ ಬಡಗನ್ನೂರು:- ಇಲ್ಲಿನ ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ದಿನಾಂಕ :- 03-12-2025 ರಂದು ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವು ಡಾ| ಕೃಷ್ಣಮೂರ್ತಿ ಟಿ ಉಜಿರೆ, ಇವರ ನೇತೃತ್ವದಲ್ಲಿ ಜರುಗಿತು. ಸಂಸ್ಥೆಗಳ ಆಡಳಿತ ಮಂಡಳಿಯ ನಿರ್ದೇಶಕರಾದ ಶ್ರೀಮಾನ್ ಗಣರಾಜ ಕುಂಬ್ಳೆ ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಇವರು ವಿದ್ಯಾರ್ಥಿಗಳು ಗುಣಾತ್ಮಕ ಫಲಿತಾಂಶದ ಕಡೆಗೆ ಗಮನಹರಿಸುವುದು ಅವಶ್ಯಕವಾಗಿದೆ ಎಂದರು. ಸಂಸ್ಥೆಗಳ ಸಂಚಾಲಕರಾದ ಶ್ರೀಮಾನ್ ವಿಘ್ನೇಶ್ ಹಿರಣ್ಯ ಇವರು ಸಮಾರಂಭದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಶ್ರೇಯೋಭಿವೃದ್ಧಿಗಾಗಿ ತರಬೇತಿಗಳು ಅವಶ್ಯಕವಾಗಿದೆ ಮತ್ತು ಎಲ್ಲಾ ವಿದ್ಯಾರ್ಥಿಗಳು ಇದರಿಂದ ಪ್ರಯೋಜನ ಪಡೆಯಲಿದ್ದಾರೆ ಎಂದರು, ಬಳಿಕ ಡಾ| ಕೃಷ್ಣಮೂರ್ತಿ ಟಿ ಉಜಿರೆ ಇವರಿಂದ ಒಂದು ದಿನದ ತರಬೇತಿಯು ನಡೆಯಿತು. ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತೆ, ಏಕಾಗ್ರತೆ, ಗೃಹಣಶಕ್ತಿ ಮತ್ತು ಆಸಕ್ತಿ ಹುಟ್ಟಿಸುವ ಕುರಿತು ಚಟುವಟಿಕೆ ಆಧಾರಿತ ತರಬೇತಿಯನ್ನು ಅವರು ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಮುಖ್ಯ ಗುರುಗಳಾದ ಸುಮನಾ ಬಿ ಮಾತಾಜಿ ಸ್ವಾಗತಿಸಿ, ಸಹ ಶಿಕ್ಷಕಿ ಭವಿತಾ ಪಿ ಮಾತಾಜಿ ವಂದಿಸಿದರು. ಮತ್ತೋರ್ವ ಸಹ ಶಿಕ್ಷಕಿ ಶೈಲಶ್ರೀ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.

Dwaraka Constructions Ad

Related Blog

karnataka volleyball team secures national runner up
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡ ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ಸ್ಥಾನ
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಗಳ ವಿದ್ಯಾರ್ಥಿಗಳು ಕ್ಷೇತ್ರೀಯ ಮಟ್ಟದ ವಿದ್ಯಾ ಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
guru prsshasti award fetured image
ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಶ್ರೀಕೃಷ್ಣ ಲೀಲೆ 2026 ಮತ್ತು ಸಾಂದೀಪನಿ ಗುರುಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ