ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ರಕ್ಷಾ ಬಂಧನ

August 9, 2025
ಪಟ್ಟೆ ಬಡಗನ್ನೂರು:-  ದಿನಾಂಕ 09-08-2025 ನೇ ಶನಿವಾರದಂದು ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟೆ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಶ್ರೀ ವಿಘ್ನೇಶ್  ಹಿರಣ್ಯ  ವಹಿಸಿ ರಕ್ಷಾ ಬಂಧನವು ಸಹೋದರ ಸಹೋದರಿಯರ ನಡುವಿನ ಪ್ರೀತಿ, ರಕ್ಷಣೆ ಮತ್ತು ಬದ್ಧತೆಯನ್ನು ಆಚರಿಸುವ ಒಂದು ಹಬ್ಬವಾಗಿದೆ ಎಂದು ಹೇಳಿದರು. ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಆರತಿ ಎತ್ತಿ, ರಾಖಿಯನ್ನು ಕಟ್ಟಿ, ಸಿಹಿ ತಿಂಡಿಯನ್ನು ಹಂಚಿ  ರಕ್ಷಾಬಂಧನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ  ಆಚರಿಸಲಾಯಿತು. ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾದ ಮಾತಾಜಿ ಶ್ರೀಮತಿ ಸುಮನ ಬಿ ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾದ ಶ್ರೀಮಾನ್ ರಾಜಗೋಪಾಲ ಯನ್  ವಂದಿಸಿದರು. ಶ್ರೀಕೃಷ್ಣ ವಿದ್ಯಾಸಂಸ್ಥೆಯ ಎಲ್ಲಾ ಶಿಕ್ಷಕರು ರಾಖಿಯನ್ನು ಕಟ್ಟಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
Dwaraka Ad

Related Blog

ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಶ್ರೀ ರಾಮನವಮಿ ಆಚರಣೆ ಮತ್ತು ಆಕಾಶಕ್ಕೆ ಏಣಿ ಬೇಸಿಗೆ ಶಿಬಿರ
ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಯ Inspire Award ಮಾದರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
Science Exhibition National Science Day
ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ