ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ 77 ನೇ ವರ್ಷದ ಗಣರಾಜ್ಯೋತ್ಸವ

January 26, 2026

ಪಟ್ಟೆ ಬಡಗನ್ನೂರು:- ದಿನಾಂಕ 26/01/2026 ನೇ ಸೋಮವಾರದಂದು ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿ 77ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಮತ್ತು ಧ್ವಜಾರೋಹಣವನ್ನು ಪಟ್ಟೆ ವಿದ್ಯಾಸಂಸ್ಥೆಗಳ ಉಪಾಧ್ಯಕ್ಷರಾದ ಶ್ರೀಮಾನ್ ಅಮೃತಕೃಷ್ಣ ಎನ್ ರವರು ಧ್ವಜಾರೋಹಣವನ್ನು ಮಾಡಿ, ಸಂವಿಧಾನ ಶಿಲ್ಪಿ ಡಾ/ ಬಿ ಆರ್ ಅಂಬೇಡ್ಕರ್ ರವರ ಮತ್ತು ಸ್ವಾತಂತ್ರ್ಯಕ್ಕೆ ಹೋರಾಡಿದ ಮಹನೀಯರ ಕೊಡುಗೆಯನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ಮುಖ್ಯ ಅತಿಥಿಗಳಾಗಿ, ಹಿರಿಯ ವಿದ್ಯಾರ್ಥಿಯಾದ ಶ್ರೀ ಶ್ರೀಶ ಪೊನ್ನೂರು ಕಜೆ ಭಾಗವಹಿಸಿ ವಿದ್ಯಾರ್ಥಿಗಳಿಗೆ ಹಿತವಚನಗಳನ್ನು ಹೇಳಿದರು. ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಮಾನ್ ವಿಘ್ನೇಶ್ ಹಿರಣ್ಯ, ಪ್ರತಿಭಾ ಪ್ರೌಢಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಲಿಂಗಪ್ಪಗೌಡ ಮೂಡಿಕೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಕೇಶವ ಪ್ರಸಾದ ನೀಲಗಿರಿ, ಶ್ರೀ ಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರ ಶ್ರೀ ಸತೀಶ್ ಕೊಪ್ಪಳ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಸೇವಾದಳ ವಿದ್ಯಾರ್ಥಿಗಳಿಂದ ಕವಾಯತು ನಡೆಯಿತು. 9 ನೇ ತರಗತಿಯ ಜೀವಿತ ಹೆಚ್ ಗಣರಾಜ್ಯೋತ್ಸವದ ಬಗ್ಗೆ ಭಾಷಣವನ್ನು ಮಾಡಿದರು.ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಶ್ರೀಮಾನ್ ರಾಜಗೋಪಾಲ್ ಆತಿಥಿಗಳನ್ನು ಸ್ವಾಗತಿಸಿದರು. ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಸುಮನ ಬಿ ಮಾತಾಜಿ ವಂದಿಸಿದರು. 9ನೇ ತರಗತಿಯ ವಿಸ್ಮಿತ ಕಾರ್ಯಕ್ರಮ ನಿರೂಪಿಸಿದರು. ಶ್ರೀಕೃಷ್ಣ ವಿದ್ಯಾಸಂಸ್ಥೆಯ ಎಲ್ಲಾ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯನ್ನು ವಿತರಿಸಲಾಯಿತು.

Dwaraka Ad

Related Blog

ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಶ್ರೀ ರಾಮನವಮಿ ಆಚರಣೆ ಮತ್ತು ಆಕಾಶಕ್ಕೆ ಏಣಿ ಬೇಸಿಗೆ ಶಿಬಿರ
ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಯ Inspire Award ಮಾದರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
Science Exhibition National Science Day
ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ