ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ, ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 100 ಫಲಿತಾಂಶ

April 24, 2026
SSLC results

ಪಟ್ಟೆ ಬಡಗನ್ನೂರು: 2025 26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರತಿಭಾ ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ ಬಂದಿರುತ್ತದೆ. ಒಟ್ಟು 22 ವಿದ್ಯಾರ್ಥಿಗಳು ಹಾಜರಾಗಿದ್ದು 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡು ಶಾಲೆಗೆ 100 ಶೇಕಡಾ ಫಲಿತಾಂಶ ಬಂದಿರುತ್ತದೆ ವಿಶಿಷ್ಟ ಶ್ರೇಣಿಯಲ್ಲಿ ದನ್ವಿತ್ ಗೌಡ ಕೆ ಪಿ 566(90.56%), ತೃತಿಕ್ 561(89.76%), ಸಿಂಚನ 543 (86.88%) ಅಂಕಗಳನ್ನು ಪಡೆದು ದನ್ವಿತ್ ಗೌಡ ಕೆ ಪಿ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಸಂಸ್ಥೆಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಸರ್ವ ಸದಸ್ಯರು, ಶಾಲಾ ಶಿಕ್ಷಕ ವರ್ಗದವರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿರುತ್ತಾರೆ. ಸಂಸ್ಥೆಯು ನಿರಂತರ ವರ್ಷಗಳಲ್ಲಿ ಶೇಕಡಾ 100 ಫಲಿತಾಂಶ ಪಡೆಯುತ್ತಿದ್ದು, ಇದು ಶಾಲೆಯ ಶೈಕ್ಷಣಿಕ ಗುಣಮಟ್ಟದ ಕೈಗನ್ನಡಿಯಾಗಿದೆ ಎಂದು ಸಂಸ್ಥೆಯ ಮುಖ್ಯ ಗುರುಗಳಾದ ಶ್ರೀಮತಿ ಸುಮನಾ ಬಿ ಮಾತಾಜಿ ತಿಳಿಸಿದರು.

Dwaraka Constructions Ad

Related Blog

ಪುತ್ತೂರು ವಲಯದ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗೆ ಬಹುಮಾನಗಳು
kanakabhiyana ramadhanya charite gamaka
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ, ಬಡಗನ್ನೂರು ಕನಕಾಭಿಯಾನ -ರಾಮಧಾನ್ಯ ಚರಿತೆ -ಗಮಕ
Shrikrishna educational trust
ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ -ವಿನಾಯಕ ಚೌತಿ ಹಬ್ಬದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ