ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರಾಥಮಿಕ ವಿಭಾಗದ ಪೋಷಕರ ಸಭೆ

October 18, 2025
sri krishna educational institutions primary section parents meeting

ಬಡಗನ್ನೂರು:- ದಿನಾಂಕ 17.10.2025 ನೇ ಶುಕ್ರವಾರದಂದು ಪುತ್ತೂರು ದ್ವಾರಕ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ 2025- 26 ನೇ ಸಾಲಿನ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಯುತ ವಿಘ್ನೇಶ್ ಹಿರಣ್ಯ ಇವರು ವಹಿಸಿ, ಪ್ರತಿ ಮಗುವಿನಲ್ಲಿಯೂ ವಿವಿಧ ರೀತಿಯ ಪ್ರತಿಭೆಗಳು ಅಡಗಿರುತ್ತವೆ. ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಶಿಕ್ಷಕರ ಮತ್ತು ಪೋಷಕರ ಪಾತ್ರ ಬಹುಮುಖ್ಯವಾದುದು ಎಂದು ತಿಳಿಸಿದರು. ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಶ್ರೀಮಾನ್ ರಾಜಗೋಪಾಲ್ ಇವರು ಪೋಷಕರ ಸಭೆಯ ಮಹತ್ವವನ್ನು ಸಭೆಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ಕೇಶವ ಪ್ರಸಾದ್ ನೀಲಗಿರಿ ಉಪಸ್ಥಿತರಿದ್ದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಪ್ರಾಥಮಿಕ ಶಾಲೆಯ ಶಿಕ್ಷಕರಾದ ಶ್ರೀಮಾನ್ ರಾಮಚಂದ್ರಪ್ಪ ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನೆರೆದಿರುವ ಪೋಷಕರ ಪರವಾಗಿ ಶ್ರೀಮತಿ ವಾಣಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಪ್ರೌಢಶಾಲಾ ವಿಭಾಗದ ಮುಖ್ಯ ಗುರುಗಳಾದ ಮಾತಾಜಿ ಸುಮನಾ ಬಿ ವಂದಿಸಿದರು. ಪ್ರಾಥಮಿಕ ಶಾಲಾ ವಿಭಾಗದ ಮಾತಾಜಿ ಶ್ರೀಮತಿ ಜ್ಯೋತಿಯವರು ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ವಿಭಾಗದ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

Dwaraka Ad

Related Blog

ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಶ್ರೀ ರಾಮನವಮಿ ಆಚರಣೆ ಮತ್ತು ಆಕಾಶಕ್ಕೆ ಏಣಿ ಬೇಸಿಗೆ ಶಿಬಿರ
ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಯ Inspire Award ಮಾದರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
Science Exhibition National Science Day
ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ