ಪಟ್ಟೆಯಲ್ಲಿ ಶ್ರೀಕೃಷ್ಣ ಲೀಲೆ – 2025 ಅಭಿನಂದನಾ ಕಾರ್ಯಕ್ರಮ

August 23, 2025
Shri krishna patte

ಪಟ್ಟೆ ಬಡಗನ್ನೂರು: ದ್ವಾರಕಾ ಪ್ರತಿಷ್ಠಾನ(ರಿ) ಪುತ್ತೂರು ಇವರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳು, ಇಲ್ಲಿ ಶ್ರೀಕೃಷ್ಣ ಲೀಲೆ 2025 ರ ಅಭಿನಂನಂದನಾ ಸಭೆಯು ದಿನಾಂಕ 22/08/2025 ರಂದು ಶಾಲಾ ಆವರಣದಲ್ಲಿ ನಡೆಯಿತು. ದಿನಾಂಕ 16/08/2025 ರಂದು ವಿಜೃಂಭಣೆಯಿಂದ ನಡೆದ ಶ್ರೀಕೃಷ್ಣ ಲೀಲೆ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಈ ಸಭೆಯಲ್ಲಿ ಕೃತಜ್ಞತೆಯನ್ನು ಸಲ್ಲಿಸಲಾಯಿತು. ಎಸ್ ಕೆ ಫ್ರೆಂಡ್ಸ್ ಮುಡಿಪಿನಡ್ಕ, ಶ್ರೀಕೃಷ್ಣ ಯುವಕಮಂಡಲ ಪಟ್ಟೆ, ಶ್ರೀಕೃಷ್ಣ ಹಿರಿಯ ವಿದ್ಯಾರ್ಥಿ ಸಂಘ ಪಟ್ಟೆ, ಶ್ರೀಕೃಷ್ಣ ಭಜನಾ ಮಂಡಳಿ ಮುಡಿಪಿನಡ್ಕ, ಅಯ್ಯಪ್ಪ ಭಜನಾ ಮಂಡಳಿ ಪೆರಿಗೇರಿ ಹಾಗೂ ನವಚೈತನ್ಯ ಯುವಕಮಂಡಲ ಪೆರಿಗೇರಿ ಇದರ ಪದಾದಿಕಾರಿಗಳು ಹಾಗೂ ಸದಸ್ಯರು ಸಭೆಯಲ್ಲಿ ಭಾಗವಹಿಸಿದರು.
ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್ ಮಾತನಾಡಿ, ಶಾಲೆಯ ಮೇಲೆ ಅಭಿಮಾನವಿಟ್ಟು ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟ ಎಲ್ಲಾ ಸಂಘದ ಪದಾಧಿಕಾರಿಗಳು, ಸ್ವಯಂಸೇವಕರು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಮತ್ತು ಸಮಾಜ ಬಾಂಧವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಎಲ್ಲರಿಗೂ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಪರವಾಗಿ ನೆನಪಿನ ಕಾಣಿಕೆಯನ್ನು ನೀಡಲಾಯಿತು. ಸಂಸ್ಥೆಯ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ ಇವರು ಸ್ವಾಗತಿಸಿ, ಮುಖ್ಯಗುರುಗಳಾದ ಶ್ರೀಮತಿ ಸುಮನಾ ಬಿ ಮಾತಾಜಿ ವಂದಿಸಿದರು. ಪೋಷಕ ವಿದ್ಯಾ ಸಂಸ್ಥೆಗಳ ಪೋಷಕ ಮಂಡಳಿಯ ಅಧ್ಯಕ್ಷರುಗಳಾದ ಶ್ರೀ ಲಿಂಗಪ್ಪ ಗೌಡ ಮೂಡಿಕೆ, ಶ್ರೀ ಕೇಶವ ಪ್ರಸಾದ್ ನೀಲಗಿರಿ, ಶ್ರೀ ಸತೀಶ್ ಕೊಪ್ಪಳ, ನಿವೃತ್ತ ಯೋಧರಾದ ಶ್ರೀ ಸುಬ್ಬಪ್ಪ ಪಾಟಾಳಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಅನೂಪ್, ಮುಖ್ಯಗುರುಗಳಾದ ಶ್ರೀ ರಾಜಗೋಪಾಲ ಎನ್, ಶಾಲಾ ಶಿಕ್ಷಕವೃಂದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Dwaraka Constructions Ad

Related Blog

ಪುತ್ತೂರು ವಲಯದ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗೆ ಬಹುಮಾನಗಳು
kanakabhiyana ramadhanya charite gamaka
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ, ಬಡಗನ್ನೂರು ಕನಕಾಭಿಯಾನ -ರಾಮಧಾನ್ಯ ಚರಿತೆ -ಗಮಕ
Shrikrishna educational trust
ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ -ವಿನಾಯಕ ಚೌತಿ ಹಬ್ಬದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ