ಪಟ್ಟೆ ಬಡಗನ್ನೂರು: ನೆಹರು ಮೆಮೋರಿಯಲ್ ಕಾಲೇಜು ಕುರುಂಜಿಭಾಗ್ ಸುಳ್ಯ ಇದರ ಸುವರ್ಣ ಮಹೋತ್ಸವದ ಅಂಗವಾಗಿ ನಡೆದ ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀಕೃಷ್ಣ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಗಳಿಸಿ ನಗದು ಬಹುಮಾನದೊಂದಿಗೆ ಟ್ರೋಪಿಯನ್ನು ಪಡೆದಿರುತ್ತಾರೆ. ಈ ತಂಡಕ್ಕೆ ತರಬೇತಿಯನ್ನು ನೀಡಿದ ಪಟ್ಟೆ ವಿದ್ಯಾ ಸಂಸ್ಥೆಗಳ ದೈಹಿಕ ಶಿಕ್ಷಣ ಶಿಕ್ಷಕರಿಗೆ ಹಾಗೂ ವಿಜೇತರಾದ ವಿದ್ಯಾರ್ಥಿನಿಯರಿಗೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಅಭಿನಂದಿಸಿದ್ದಾರೆ.
