ಪಟ್ಟೆ ಬಡಗನ್ನೂರು : ಶಾಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು,ಪಟ್ಟೆ ಇವುಗಳ ಸಹಯೋಗದಲ್ಲಿ 14 ಮತ್ತು 17ರ ವಯೋಮಾನದ, ಪ್ರೌಢ ಮತ್ತು ಪ್ರಾರ್ಥಮಿಕ ಶಾಲಾ ಬಾಲಕ ಬಾಲಕಿಯರ, ಪುತ್ತೂರು ಗ್ರಾಮಾಂತರ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟವು ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಕ್ರೀಡಾಂಗಣದಲ್ಲಿ ಜರಗಿತು.
ಪಂದ್ಯಾಟವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ದ್ವಾರಕ ಪ್ರತಿಷ್ಠಾನ (ರಿ.) ಪುತ್ತೂರು ಇದರ ಕಾರ್ಯದರ್ಶಿಯಾದ ಶ್ರೀಗಣರಾಜ ಕುಂಬ್ಳೆ ಅವರು ” ಕ್ರೀಡಾಕ್ಷೇತ್ರ ಎನ್ನುವುದು ಸ್ಪರ್ಧೆಯೊಂದಿಗೆ ಸಾಧನೆಯನ್ನು ಬಯಸುತ್ತದೆ. ನಿರಂತರವಾಗಿ ತಮ್ಮ-ತಮ್ಮ ಶಾಲೆಯ ಕ್ರೀಡಾಂಗಣದಲ್ಲಿ ಸತತವಾಗಿ ಅಭ್ಯಾಸ ಮಾಡಿ ಆಯ್ಕೆಯಾಗಿ ಇಲ್ಲಿಗೆ ಬಂದಿದ್ದೀರಿ, ಒಳ್ಳೆಯ ಆಟಗಾರರಾಗಿ ಕಲಾತ್ಮಕವಾದ ಕ್ರೀಡೆಯನ್ನು ಪ್ರದರ್ಶನ ಮಾಡಿ ತಮ್ಮ ಶಾಲೆಗೆ ಹೆಸರನ್ನು ತರಬೇಕು” ಎಂದು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀಮತಿ ಸಿಲ್ವಿಯಾ ಆರ್. ಕ್ಯಾಸ್ಟಲಿನೋ ಪಂದ್ಯಾಟಕ್ಕೆ ಶುಭ ಹಾರೈಸಿದರು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಿಘ್ನೇಶ್ ಹಿರಣ್ಯ,ಪುತ್ತೂರು ತಾಲೂಕು
ದೈಹಿಕ ಶಿಕ್ಷಣ ಶಿಕ್ಷಕರಸಂಘದ ಅಧ್ಯಕ್ಷರಾದ ಶ್ರೀಮತಿ ಪ್ರವೀಣ ರೈ, ನೋಡಲ್ ಅಧಿಕಾರಿಯಾದ ಸ್ಟಾನಿ ಪ್ರವೀಣ್ ಮಸ್ಕರೇನಸ್, ಪ್ರೌಢಶಾಲಾ SDMC ಅಧ್ಯಕ್ಷರಾದ ಶ್ರೀ ಲಿಂಗಪ್ಪಗೌಡ ಮೋಡಿಕೆ, ಪ್ರಾಥಮಿಕ ಶಾಲಾ SDMC ಅಧ್ಯಕ್ಷರಾದ ಶ್ರೀ ಕೇಶವಪ್ರಸಾದ್ ನೀಲಗಿರಿ, ಪ್ರೌಢಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಮನಾ ಬಿ,ಪ್ರಾಥಮಿಕ ಶಾಲಾ ಮುಖ್ಯಗುರುಗಳಾದ ಶ್ರೀಮಾನ್ ರಾಜಗೋಪಾಲ್ ಎನ್, ಆಂಗ್ಲ ಮಾಧ್ಯಮ ಶಾಲಾ ಮುಖ್ಯಗುರುಗಳಾದ ಶ್ರೀಮತಿ ಪುಷ್ಪಾವತಿ, ಡಿ. ಉಪಸ್ಥಿತರಿದ್ದರು. ಪ್ರೌಢಶಾಲಾ ಶಿಕ್ಷಕಿಯಾದ ಶ್ರೀಮತಿ ಭವಿತಾ ಮಾತಾಜಿಯವರು ಸ್ವಾಗತಿಸಿ, ಪ್ರಾಥಮಿಕ ಶಾಲಾ ಶಿಕ್ಷಕಿಯಾದ ಶ್ರೀಮತಿ ಲತಾ ಮಾತಾಜಿ ಧನ್ಯವಾದಗಳನ್ನು ಅರ್ಪಿಸಿದರು.
ಸಮಾರೋಪ ಸಮಾರಂಭ : ಪಂದ್ಯಾಟದ ಸಮಾರೋಪ ಸಮಾರಂಭವು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ ರವರ ಅಧ್ಯಕ್ಷತೆಯಲ್ಲಿ ಜರಗಿತು. ವಿಜೇತರಾದ ತಂಡಗಳಿಗೆ ಸಂಚಾಲಕರು ಬಹುಮಾನವನ್ನು ವಿತರಿಸಿ ಶುಭ ಹಾರೈಸಿದ್ದರು. ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀಮತಿ ಪ್ರವೀಣ ರೈ, ಪ್ರಾಥಮಿಕ ಶಾಲಾ ಮುಖ್ಯಗುರುಗಳು, ಪಟ್ಟೆ ವಿದ್ಯಾ ಸಂಸ್ಥೆಗಳ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮಾನ್ ಮೋನಪ್ಪ, ಶ್ರೀಮಾನ್ ಗೋಪಿನಾಥ್ ಉಪಸ್ಥಿತರಿದ್ದರು.
ಪ್ರೌಢಶಾಲಾ ಶಿಕ್ಷಕರಾದ ಶ್ರೀ ವಿಶ್ವನಾಥ್ ಗೌಡ ಬೊಳ್ಳಾಡಿ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಮೋನಪ್ಪರವರು ಧನ್ಯವಾದಗಳನ್ನು ಅರ್ಪಿಸಿದರು.
ಪಂದ್ಯಾಟದಲ್ಲಿ ವಿಜೇತರಾದ ತಂಡಗಳು :
14ರ ವಯೋಮಾನದ ಬಾಲಕಿಯರ ತಂಡ ಪ್ರಥಮ- ಪ್ರತಿಭಾ ಪ್ರೌಢಶಾಲೆ ಪಟ್ಟೆ,
ದ್ವಿತೀಯ-ಸರಕಾರಿ ಪ್ರೌಢಶಾಲೆ ಪಾಪೆಮಜಲು
14ರ ವಯೋಮಾನದ ಬಾಲಕರ ತಂಡ ಪ್ರಥಮ- ಸರಕಾರಿ ಉನ್ನತೀಕರಿಸುವ ಶಾಲೆ, ಇರ್ದೆ ಉಪ್ಪಳಿಗೆ,
ದ್ವಿತೀಯ -ಸರಕಾರಿ ಪ್ರೌಢ ಶಾಲೆ, ಬೆಟ್ಟಂಪಾಡಿ.
17ರ ವಯೋಮಾನದ ಬಾಲಕಿಯರ ತಂಡ ಪ್ರಥಮ- ಪ್ರತಿಭಾ ಪ್ರೌಢಶಾಲೆ ಪಟ್ಟೆ,
ದ್ವಿತೀಯ -ಸರಕಾರಿ ಪ್ರೌಢಶಾಲೆ ನೆಟ್ಟಣಿಗೆ ಮೂಡ್ನೂರು.
17 ರ ವಯೋಮಾನದ
ಬಾಲಕರ ತಂಡ ಪ್ರಥಮ- ಸರಕಾರಿ ಪ್ರೌಢಶಾಲೆ ನೆಟ್ಟಣಿಗೆ ಮೂಡ್ನೂರು ದ್ವಿತೀಯ-ಗಜಾನನ ಆಂಗ್ಲ ಮಾಧ್ಯಮ ಪ್ರೌಢಶಾಲೆ ಈಶ್ವರ ಮಂಗಲ.





