‘ಉಜ್ಜೀವನ ಲೋಕಾರ್ಪಣ’ ಆಮಂತ್ರಣ ಪತ್ರಿಕೆ ಬಿಡುಗಡೆ

June 11, 2026

ದ್ವಾರಕಾ ಕಾರ್ಪ್. ಪ್ರೈ. ಲಿ. ಇದರ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಉಜ್ಜೀವನ ಬಡಾವಣೆಯ ಲೋಕಾರ್ಪಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಜೂನ್ 11, 2026ರಂದು ಪುತ್ತೂರಿನ ಗೋಕುಲ ಬಡಾವಣೆಯ ನಂದಗೋಕುಲ ವೇದಿಕೆಯಲ್ಲಿ ಜರಗಿತು. ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಖ್ಯಾತ ವೈದ್ಯ ಶ್ರೀ ಸುರೇಶ ಪುತ್ತೂರಾಯ ಇವರು ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿ ಉಜ್ಜೀವನ ಲೋಕಾರ್ಪಣ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ್ವಾರಕಾ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಗೋಪಾಲಕೃಷ್ಣ ಭಟ್ಟ ಅರ್ತ್ಯಡ್ಕ ವಹಿಸಿದ್ದರು. ಸಭೆಯಲ್ಲಿ ದ್ವಾರಕಾ ಸಮೂಹ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಶ್ರೀ ಅಮೃತಕೃಷ್ಣ ಎನ್.,  ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿಗಳಾಗಿರುವ ಶ್ರೀ ಗಣರಾಜ ಕುಂಬ್ಳೆಯವರು ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಶ್ರೀ ಅಮೃತಕೃಷ್ಣ ಎನ್. ನೆರೆದ ಸರ್ವರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಸಿಬ್ಬಂದಿ ಶ್ರೀ ನವೀನಕೃಷ್ಣ ಎಸ್. ಉಪ್ಪಿನಂಗಡಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಇದೇ ಬರುವ ಜೂನ್ 21ರಂದು ಉಜ್ಜೀವನ ಬಡಾವಣೆಯ ಲೋಕಾರ್ಪಣ ಕಾರ್ಯಕ್ರಮ ಉಪ್ಪಿನಂಗಡಿಯ ಕೆಮ್ಮಾರದ ಉಜ್ಜೀವನ ಬಡಾವಣೆಯಲ್ಲಿ ನಡೆಯಲಿದೆ.

Dwaraka Constructions Ad

Related Blog

ಪುತ್ತೂರು ವಲಯದ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗೆ ಬಹುಮಾನಗಳು
kanakabhiyana ramadhanya charite gamaka
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ, ಬಡಗನ್ನೂರು ಕನಕಾಭಿಯಾನ -ರಾಮಧಾನ್ಯ ಚರಿತೆ -ಗಮಕ
Shrikrishna educational trust
ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ -ವಿನಾಯಕ ಚೌತಿ ಹಬ್ಬದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ